Indian News

ಪೋಲಿಯೋ ಹನಿ ಬದಲು 12 ಮಕ್ಕಳಿಗೆ ಸ್ಯಾನಿಟೈಸರ್ ಹಾಕಿದ ...

Source: , Posted On:   01 February 2021

ಮುಂಬೈ,ಫೆಬ್ರವರಿ 01:ಪೋಲಿಯೋ ಹನಿ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಬ್ಬಂದಿಯ ತೀವ್ರ ನಿರ್ಲಕ್ಷ್ಯದ ಪರಿಣಾಮ 12 ಮಕ್ಕಳಿಗೆ ಪೋಲಿಯೊ ಲಸಿಕೆ ಹನಿಗಳ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ಹಾಕಿದ್ದರು.

ಯಾವ ರಾಜ್ಯದಲ್ಲಿ ಎಷ್ಟು ಮಕ್ಕಳಿಗೆ ಪೋಲಿಯೋ ಲಸಿಕೆ: ಇಲ್ಲಿದೆ ಮಾಹಿತಿ

5 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಮಕ್ಕಳಿಗೆ ಪೋಲಿಯೊ ಹನಿಗಳ ಬದಲಿಗೆ ಎರಡು ಹನಿ ಸ್ಯಾನಿಟೈಸರ್ ನೀಡಲಾಗಿದೆ ಎಂದು ಯವತ್ಮಾಲ್ ಜಿಲ್ಲಾ ಪರಿಷತ್ ಸಿಇಒ ಶ್ರೀಕೃಷ್ಣ ಪಂಚಲ್ ತಿಳಿಸಿದ್ದಾರೆ. 12 ಮಕ್ಕಳಲ್ಲಿ ಒಂದು ಮಗು ವಾಂತಿ ಮಾಡಿದೆ" ಎಂದು ಅವರು ಹೇಳಿದ್ದಾರೆ.

 

5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸ್ಯಾನಿಟೈಸರ್ ಹಾಕಲಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಪ್ಸಿಕೊಪ್ರಿ ಗ್ರಾಮದ ಭನ್ಬೋರಾ ಪಿಎಚ್‌ಸಿ(ಪ್ರಾಥಮಿಕ ಆರೋಗ್ಯ ಕೇಂದ್ರ)ದಲ್ಲಿ ಭಾನುವಾರ 1-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ವ್ಯಾಕ್ಸಿನೇಷನ್ ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪೋಲಿಯೊ ಲಸಿಕೆ ಹಾಕುವ ವೇಳೆ ನಿರ್ಲಕ್ಷ್ಯ ವಹಿಸಿದ ಮೂವರು ಆರೋಗ್ಯ ಕಾರ್ಯಕರ್ತರನ್ನು ಅಮಾನತು ಮಾಡಲಾಗುವುದು ಎಂದು ಪಂಚಲ್ ತಿಳಿಸಿದ್ದಾರೆ.

Let's block ads! (Why?)

Mon, 01 Feb 2021 23:35:06 +0000 Nayana Bj kn text/html https://kannada.oneindia.com/news/mumbai/12-kids-administered-sanitiser-drops-instead-of-polio-dose-in-maharashtra-s-yavatmal-district-214205.html

Back